ಪ್ರಚೋದನಕಾರಿ ಬರಹ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಕಮಿಷನರ್ ವಿಕಾಸ್‌ ಕುಮಾರ್

Update: 2020-11-29 12:25 GMT

ಮಂಗಳೂರು, ನ.29: ಮಂಗಳೂರಿನ ಎರಡು ಕಡೆ ಗೋಡೆ ಮೇಲೆ ಪ್ರಚೋದನಕಾರಿ ಬರವಣಿಗೆ ಕಂಡುಬಂದಿದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ‌ಕುಮಾರ್ ತಿಳಿಸಿದ್ದಾರೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ಠಾಣೆಗಳಲ್ಲಿ ಕೇಸು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅತಿ ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಯಾರಾದರೂ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ (9480802304), ಅಪರಾಧ ಮತ್ತು ಸಂಚಾರ ಡಿಸಿಪಿ (9480802305), ನಗರ ನಿಯಂತ್ರಣ ಕೊಠಡಿ (0824- 2220800) ಅಥವಾ ಸಮೀಪದ ಪೊಲಿೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ವ್ಯಕ್ತಿಯ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News