ಮುರುಡೇಶ್ವರ : ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು

Update: 2020-11-29 13:31 GMT

ಭಟ್ಕಳ :  ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ರವಿವಾರ ನಡೆದಿದೆ.

ಮೃತ ಯುವಕನನ್ನು ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಎಂದು ಗುರುತಿಸಲಾಗಿದೆ.

ತನ್ನ ಏಳು ಮಂದಿ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮಂಜುನಾಥ್ ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆಯಲ್ಲಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಘಟನೆ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News