ಉಡುಪಿ : 38 ಮಂದಿಗೆ ಕೊರೋನ ಪಾಸಿಟಿವ್

Update: 2020-11-29 13:35 GMT

ಉಡುಪಿ, ನ.29: ಜಿಲ್ಲೆಯಲ್ಲಿ ರವಿವಾರ 38 ಮಂದಿಯಲ್ಲಿ ಕೊರೋನ ಸೋಂಕಿ ಪಾಸಿಟಿವ್ ದೃಢಪಟ್ಟಿದೆ. 23 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಸದ್ಯ ಒಟ್ಟು 219 ಮಂದಿ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 22 ಮಂದಿ ಪುರುಷರು ಹಾಗೂ 16 ಮಂದಿ ಮಹಿಳೆಯರು. ಇವರಲ್ಲಿ 14 ಮಂದಿ ಪುರುಷರು ಹಾಗೂ 13 ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 21, ಕುಂದಾಪುರ ತಾಲೂಕಿನ 9, ಕಾರ್ಕಳ ತಾಲೂಕಿನ ಏಳು ಹಾಗೂ ಹೊರಜಿಲ್ಲೆಯಿಂದ ಬಂದ ಒಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

23 ಮಂದಿ ಗುಣಮುಖ:  ಶನಿವಾರ ಜಿಲ್ಲೆಯಲ್ಲಿ 23 ಮಂದಿ ಚಿಕಿತ್ಸೆ ಬಳಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,269 ಆಗಿದೆ. ಜಿಲ್ಲೆಯಲ್ಲಿ ಸದ್ಯ 219 ಮಂದಿ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2247 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 2286 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2247 ಮಂದಿ ನೆಗೆಟಿವ್ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 39 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,675ಕ್ಕೇರಿದೆ.

ಜಿಲ್ಲೆಯಲ್ಲಿ ಶನಿವಾರದವರೆಗೆ ಒಟ್ಟು 2,43,473 ಮಂದಿ ಕೋವಿಡ್ ಪರೀಕ್ಷೆ ಗೊಳಗಾಗಿದ್ದಾರೆ. ಇವರಲ್ಲಿ 2,20,798 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,675 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,269 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸತತ 22 ದಿನಗಳಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News