ದ.ಕ. ಜಿಲ್ಲೆ : 48 ಮಂದಿಗೆ ಕೊರೋನ ಸೋಂಕು, ಓರ್ವ ಬಲಿ

Update: 2020-11-29 14:34 GMT

ಮಂಗಳೂರು, ನ. 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 48 ಮಂದಿಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 38 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ದೃಢಪಟ್ಟ 31,896 ಪಾಸಿಟಿವ್ ಪ್ರಕರಣಗಳಲ್ಲಿ ಈಗಾಗಲೇ 30,576 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 712 ಮಂದಿ ಬಲಿಯಾಗಿದ್ದಾರೆ. ಪ್ರಸ್ತುತ 608 ಸಕ್ರಿಯ ಸೋಂಕಿತರು ಮನೆಗಳಲ್ಲಿ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಮಾಸ್ಕ್ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸುತ್ತಿರುವ ಕ್ರಮ ಮುಂದುವರಿದಿದ್ದು, ಇದುವರೆಗೆ ಒಟ್ಟು 14,778 ಪ್ರಕರಣಗಳನ್ನು ಪತ್ತೆಹಚ್ಚಿ 15,87,522 ರು. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News