​ಕಾರು ಢಿಕ್ಕಿ : ಸ್ಕೂಟರ್ ಸವಾರ ಮೃತ್ಯು

Update: 2020-11-29 15:05 GMT

ಕಾಪು, ನ.29: ಕಾರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.28ರಂದು ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲಾ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಸುಭಾಷ ಕಿಣಿ ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಕಡೆಯಿಂದ ಬಂದು, ಕಾಪು ಪೇಟೆಗೆ ಹೋಗಲು ಜಂಕ್ಷನ್‌ನಲ್ಲಿ ನಿಂತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದ ಅವರು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News