ಡ್ರಗ್ಸ್ ಪ್ರಕರಣ: ನ.30ರಂದು ಹೈಕೋರ್ಟ್ ನಲ್ಲಿ ನಟಿ ಸಂಜನಾ ಜಾಮೀನು ಅರ್ಜಿ ವಿಚಾರಣೆ

Update: 2020-11-29 15:57 GMT

ಬೆಂಗಳೂರ, ನ. 29: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ 2ನೆ ಬಾರಿ ಸಲ್ಲಿಸಿರುವ ಅರ್ಜಿ ನಾಳೆ(ನ.30) ವಿಚಾರಣೆಗೆ ಬರಲಿದೆ. 

ಜಾಮೀನು ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನ.3ರಂದು ವಜಾಗೊಳಿಸಿತ್ತು. ಇದೀಗ ಮತ್ತೆ ಹೈಕೋರ್ಟ್ ಮೆಟ್ಟಿಲೇರಿರುವ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ನ್ಯಾಯಪೀಠ ನ.27ರಂದು ವಕೀಲರ ವಾದ ಆಲಿಸಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಕಾಟನ್‍ಪೇಟೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News