ಕನ್ನಡ ಬೆಳೆಸಲು ಸಂವಿಧಾನದಲ್ಲಿ ತಿದ್ದುಪಡಿಯಾಗಬೇಕು: ಟಿ.ಎಸ್.ನಾಗಾಭರಣ

Update: 2020-11-29 16:13 GMT

ಬೆಂಗಳೂರ, ನ. 29: ಕನ್ನಡಿಗರಿಗೆ ಹಾಗೂ ಕನ್ನಡ ಮಾಧ್ಯಮದಲ್ಲಿ ಓದಿರುವ ಎಲ್ಲರಿಗೂ ಕಡ್ಡಾಯವಾಗಿ ಕೆಲಸ ನೀಡಬೇಕು. ಹೀಗಾಗಿ ಈ ವರ್ಷವನ್ನು ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಕರೆ ನೀಡಿದ್ದಾರೆ.

ರವಿವಾರ ನಗರದ ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ನಡೆದ ಕನ್ನಡ ಭಾವ-ಬದುಕು ಕಲ್ಪನೆಯೊಂದಿಗೆ ಕನ್ನಡದ ನಮ್ಮತನದ ಬಗ್ಗೆ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭವಿಷ್ಯದ ಕನ್ನಡದ ಬಗ್ಗೆ ಯೋಚಿಸಬೇಕು. ಕನ್ನಡ ಬೆಳೆಸಲು ಸಂವಿಧಾನದಲ್ಲಿ ತಿದ್ದುಪಡಿ ಮಾಡಲು ಆಂದೋಲನ ನಡೆಸಬೇಕಿದೆ. ಅಲ್ಲದೆ ಈ ವರ್ಷವನ್ನು ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ನಾ.ದಾ.ಶೆಟ್ಟಿ, ಜಯಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್, ಪತ್ರಕರ್ತೆ ಡಾ.ಆರ್.ಪೂರ್ಣಿಮಾ, ವೇಣುಶರ್ಮಾ, ಕೇಶವ ಪ್ರಸಾದ್ ಮುಳಿಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News