ಜೆಡಿಎಸ್ ಉಡುಪಿ ಕ್ಷೇತ್ರ ಅಧ್ಯಕ್ಷರಾಗಿ ಬಾಲಕೃಷ್ಣ ಆಚಾರ್ಯ ಆಯ್ಕೆ

Update: 2020-11-30 09:05 GMT

ಉಡುಪಿ, ನ. 30: ಜೆಡಿಎಸ್ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರನ್ನಾಗಿ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅನುಮೋದನೆಯೊಂದಿಗೆ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇವರು ಉಡುಪಿ ಜಿಲ್ಲೆಯ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಮಾಜಿ ಅಧ್ಯಕ್ಷರಾಗಿ ಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಜನ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News