ಸಂವಿಧಾನಕ್ಕೆ ಅನುಗುಣವಾಗಿ ಎಲ್ಲರೂ ಜೀವಿಸಬೇಕು: ಡಾ.ಸುಕನ್ಯಾ

Update: 2020-11-30 09:11 GMT

ಉಡುಪಿ, ನ.30: ಭಾರತ ಸಂವಿಧಾನ ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು. ಸರ್ವಸಮಾನತೆ, ಸಮಭಾವದ ದೃಷ್ಠಿಯಲ್ಲಿ ರಚಿಸಲ್ಪಟ್ಟ ಸಂವಿಧಾನ ಇದಾಗಿದೆ. ಈ ಸಂವಿಧಾನಕ್ಕೆ ಅನುಗುಣವಾಗಿ ಎಲ್ಲರೂ ಜೀವಿಸಬೇಕಾಗಿದೆ. ಭಾರತದ ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆತ್ಮವಿದ್ದಂತೆ ಎಂದು ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಜೆ. ಹೇಳಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ಇತ್ತೀಚೆಗೆ ಹಮ್ಮಿ ಕೊಳ್ಳಲಾದ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರವುದಲ್ಲಿ ಅವರು ಮಾತನಾಡು ತಿದ್ದರು.

ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ದುರ್ಗಾ ಲಕ್ಷ್ಮೀ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀಪತಿ ಜಿ.ಯು. ಹಾಗೂ ಪ್ರೇಮ ನಾಥ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಸಂವಿಧಾನದ ಕುರಿತು ಮಾಹಿತಿ ನೀಡಿದರು.

ಎನ್‌ಎಸ್‌ಎಸ್ ಯೋಜನಾಧಿಕಾರಿ ರಮಾನಂದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯೋಜನಾಧಿಕಾರಿ ಶ್ರೀಲತಾ ಆಚಾರ್ಯ ಪ್ರತಿಜ್ಞಾ ವಿಧಿ ಬೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News