ಉಡುಪಿ: 67 ಗ್ರಾಪಂಗಳಿಗೆ ಮೊದಲ ಹಂತದಲ್ಲಿ, 87 ಗ್ರಾಪಂ ಗಳಿಗೆ ಎರಡನೇ ಹಂತದಲ್ಲಿ ಮತದಾನ

Update: 2020-11-30 12:01 GMT

ಉಡುಪಿ, ನ.30: ಜಿಲ್ಲೆಯ ಒಟ್ಟು 154 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಇದು ಮುಂದಿನ ಡಿಸೆಂಬರ್ 31ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಣಿಪಾಲದ ಜಿಪಂ ಸಭಾಂಗಣದಲ್ಲಿ ಇಂದು ಕರೆಯಲಾದ ಸುದ್ದಿಗೋಷ್ಠಿ ಯಲ್ಲಿ ಅವರು ಈ ವಿಷಯ ತಿಳಿಸಿದರು. ಮೊದಲ ಹಂತದಲ್ಲಿ ಡಿ.22ರಂದು ಜಿಲ್ಲೆಯ ನಾಲ್ಕು ತಾಲೂಕುಗಳ ಒಟ್ಟು 67 ಗ್ರಾಪಂಗಳಿಗೆ ಚುನಾವಣೆ ನಡೆದರೆ, ಎರಡನೇ ಹಂತದಲ್ಲಿ ಡಿ.27ರಂದು ಉಳಿದ ಮೂರು ತಾಲೂಕುಗಳ 87 ಗ್ರಾಪಂ ಗಳಿಗೆ ಮತದಾನ ನಡೆಯಲಿದೆ ಎಂದು ಅವರು ಹೇಳಿದರು.

ಮೊದಲ ಹಂತದಲ್ಲಿ ಉಡುಪಿ ತಾಲೂಕಿನ 16ಗ್ರಾಪಂಗಳಿಗೆ, ಹೆಬ್ರಿಯ 9, ಬ್ರಹ್ಮಾವರದ 27 ಹಾಗೂ ಬೈಂದೂರಿನ 15 ಗ್ರಾಪಂಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಕುಂದಾಪುರ ತಾಲೂಕಿನ 44ಗ್ರಾಪಂ, ಕಾರ್ಕಳದ 27 ಹಾಗೂ ಕಾಪುವಿನ 16ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದವರು ನುಡಿದರು.

ಜಿಲ್ಲೆಯ ಏಳು ತಾಲೂಕುಗಳಲ್ಲಿರುವ ಒಟ್ಟು 154 ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಒಟ್ಟು 890 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಅಲ್ಲದೇ ಜಿಲ್ಲೆಯಲ್ಲಿ ಒಟ್ಟು 282 ಆಕ್ಸಿಲರಿ ಮತಗಟ್ಟೆಗಳಿದ್ದು, ಇದರಿಂದ ಜಿಲ್ಲೆಯಲ್ಲಿರುವ ಒಟ್ಟು ಮತಗಟ್ಟೆಗಳ ಸಂಖ್ಯೆ 1172 ಆಗಿದೆ ಎಂದರು.

ಉಡುಪಿ ಜಿಲ್ಲೆಯ ಗ್ರಾಪಂ ಚುನಾವಣೆಯಲ್ಲಿ 3,82,785 ಪುರುಷ ಮತದಾರರು, 4,12,887 ಮಹಿಳಾ ಮತದಾರರು ಹಾಗೂ 9 ಮಂದಿ ಇತರೆ ಮತದಾರರು ಸೇರಿದಂತೆ ಒಟ್ಟು 7,95,681 ಮಂದಿ ಎರಡು ಹಂತದ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದರು.

ಮೊದಲ ಹಂತದ ಚುನಾವಣೆಗೆ ಡಿ.7ರ ಸೋಮವಾರ ಅಧಿಸೂಚನೆ ಹೊರಡಿಸಿದರೆ, ಎರಡನೇ ಹಂತಕ್ಕೆ 11ರ ಶುಕ್ರವಾರ ಅಧಿಸೂಚನೆ ಹೊರಡಿಸ ಲಾಗುವುದು. ನಾಮಪತ್ರ ಸಲ್ಲಿಸಲು ಮೊದಲ ಹಂತಕ್ಕೆ ಡಿ.11 ಹಾಗೂ ಎರಡನೇ ಹಂತಕ್ಕೆ ಡಿ.16 ಕೊನೆಯ ದಿನವಾಗಿರುತ್ತದೆ. ಕ್ರಮವಾಗಿ ಡಿ.12 ಹಾಗೂ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.14 ಮತ್ತು 19 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಚುನಾವಣೆಗೆ ಡಿ.7ರ ಸೋಮವಾರ ಅಧಿಸೂಚನೆ ಹೊರಡಿಸಿದರೆ, ಎರಡನೇ ಹಂತಕ್ಕೆ 11ರ ಶುಕ್ರವಾರ ಅಧಿಸೂಚನೆ ಹೊರಡಿಸ ಲಾಗುವುದು. ನಾಮಪತ್ರ ಸಲ್ಲಿಸಲು ಮೊದಲ ಹಂತಕ್ಕೆ ಡಿ.11 ಹಾಗೂ ಎರಡನೇ ಹಂತಕ್ಕೆ ಡಿ.16 ಕೊನೆಯ ದಿನವಾಗಿರುತ್ತದೆ. ಕ್ರಮವಾಗಿ ಡಿ.12 ಹಾಗೂ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.14 ಮತ್ತು 19 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ನೀತಿ ಸಂಹಿತೆ ಜಾರಿ: ಅಗತ್ಯವಿದ್ದರೆ ಡಿ.22 ಮತ್ತು 27ರಂದು ಚುನಾವಣೆ ನಡೆಯಲಿದೆ. ಡಿ.30ರ ಬುಧವಾರ ಮತಗಳ ಎಣಿಕೆ ನಡೆಯಲಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಂಡಿದೆ. ಇದು ಡಿ.31 ಸಂಜೆ 5:00ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರಸಭೆ, ಪುರಸಭೆ, ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.

ಗ್ರಾಪಂ ಚುನಾವಣೆ ಪಕ್ಷ ರಹಿತವಾಗಿ ನಡೆಯುತ್ತದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣೆಗೆಗಾಗಿ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಗಳನ್ನು ನೇಮಕ ಮಾಡಲಾಗಿದೆ. ಮತಗಟ್ಟೆಯನ್ನು ಸಿದ್ಧಪಡಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಮತದಾರರ ಸಂಖ್ಯೆಯನ್ನು ಗರಿಷ್ಠ 1,000ಕ್ಕೆ ಮಿತ ಗೊಳಿಸಲಾಗಿದೆ. ಅಧಿಕಾರಿಗಳು ಇಂದಿನಿಂದಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಟೈಸ್ ಗೊಳಿಸಿ ಮತ ಚಲಾಯಿಸಬೇಕು.ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧ ಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಜಗದೀಶ್ ನುಡಿದರು. 

ಚುನಾವಣೆಗೆ ಮತಪತ್ರ ಬಳಕೆ

ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಸಿ ಮತಪೆಟ್ಟಿಗೆಗಳ ಮೂಲಕ ಚುನಾವಣೆ ನಡೆಸಲಾಗುತ್ತದೆ. ಕೇವಲ ಬೀದರ್ ಜಿಲ್ಲೆಯಲ್ಲಿ ಮಾತ್ರ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ)ಗಳನ್ನು ಬಳಸಿ ಚುನಾವಣೆ ನಡೆಸಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News