ಬಲವಂತ ಬಂದ್ ಮಾಡಿದರೆ ಕಾನೂನು ಕ್ರಮ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

Update: 2020-11-30 13:08 GMT

ಬೆಂಗಳೂರು, ನ.30: ಡಿ.5ರಂದು ಕನ್ನಡಪರ ಸಂಘಟನೆಗಳು ರಾಜ್ಯ ಬಂದ್‍ಗೆ ಕರೆ ನೀಡಿದ್ದು, ಈ ವೇಳೆ ಬಿಬಿಎಂಪಿ ಮಾರುಕಟ್ಟೆಗಳನ್ನು ಬಲವಂತವಾಗಿ ಮುಚ್ಚಿದರೆ, ಕಾನೂನು ಕ್ರಮ ಕೈಗೊಂಡು ದೂರು ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಮಾರುಕಟ್ಟೆಗಳನ್ನು ಮುಚ್ಚಿಸಲು ಹೋಗಬಾರದು. ಬಲವಂತವಾಗಿ ವ್ಯಾಪಾರಿಗಳನ್ನು ಬಂದ್‍ಗೆ ಬೆಂಬಲಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು.

ಅಲ್ಲದೆ, ಈ ಬಗ್ಗೆ ಹೈಕೋರ್ಟ್, ಸುಪ್ರೀಂಕೋರ್ಟ್ ನಿರ್ದೇಶನವೂ ಇದೆ. ಹೀಗಾಗಿ ಒತ್ತಾಯ ಪೂರ್ವಕವಾಗಿ ಮಾರುಕಟ್ಟೆಗಳನ್ನು ಬಂದ್ ಮಾಡಿಸಿ, ಜನರಿಗೆ ವ್ಯಾಪಾರಿಗಳಿಗೆ ತೊಂದರೆ ನೀಡಬಾರದು. ಒಂದು ವೇಳೆ ತೊಂದರೆ ನೀಡಿದರೆ, ತಪ್ಪಿತಸ್ಥರ ವಿರುದ್ಧ ಸ್ಥಳೀಯ ಅಧಿಕಾರಿಗಳೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News