ಉಡುಪಿ ಜಿಲ್ಲೆಯಲ್ಲಿಂದು15 ಮಂದಿಗೆ ಕೊರೋನ ಪಾಸಿಟಿವ್

Update: 2020-11-30 13:32 GMT

ಉಡುಪಿ, ನ.30: ಜಿಲ್ಲೆಯಲ್ಲಿ ಸೋಮವಾರ 15 ಮಂದಿಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 29 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, ಒಟ್ಟು 205 ಮಂದಿ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 8 ಮಂದಿ ಪುರುಷರು ಹಾಗೂ 7 ಮಂದಿ ಮಹಿಳೆಯರು. ಇವರಲ್ಲಿ ತಲಾ ನಾಲ್ವರು ಪುರುಷರು ಹಾಗೂ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 11, ಕುಂದಾಪುರ ತಾಲೂಕಿನ ಹಾಗೂ ಕಾರ್ಕಳ ತಾಲೂಕಿನ ತಲಾ ಇಬ್ಬರು ಕೊರೋನ ಪಾಸಿಟಿವ್ ಬಂದಿದೆ ಎಂದು ಡಾ.ಸೂಡ ತಿಳಿಸಿದರು.

29 ಮಂದಿ ಗುಣಮುಖ: ರವಿವಾರ ಜಿಲ್ಲೆಯಲ್ಲಿ 29 ಮಂದಿ ಚಿಕಿತ್ಸೆ ಬಳಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,298 ಆಗಿದೆ. ಜಿಲ್ಲೆಯಲ್ಲಿ ಸದ್ಯ 205 ಮಂದಿ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

1915 ನೆಗೆಟಿವ್: ಜಿಲ್ಲೆಯಲ್ಲಿ ರವಿವಾರ ಒಟ್ಟು 1928 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1915 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 13 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,690ಕ್ಕೇರಿದೆ.

ಜಿಲ್ಲೆಯಲ್ಲಿ ರವಿವಾರದವರೆಗೆ ಒಟ್ಟು 2,45,401 ಮಂದಿ ಕೋವಿಡ್ ಪರೀಕ್ಷೆ ಗೊಳಗಾಗಿದ್ದಾರೆ. ಇವರಲ್ಲಿ 2,22,711 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,690 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,298 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸತತ 23 ದಿನಗಳಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

54 ವಿದ್ಯಾರ್ಥಿಗಳು ಪಾಸಿಟಿವ್: ಈವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 54 ಮಂದಿ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕೊರೋನ ಪರೀಕ್ಷೆಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಿಎಚ್‌ಓ ಡಾ.ಸೂಡ ತಿಳಿಸಿದ್ದಾರೆ.

ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ನಡೆಸಲು ಕಾಲೇಜುಗಳಿಗೆ ಸರಕಾರ ಅನುಮತಿ ನೀಡಿದ್ದು, ಹೆತ್ತವರ ಅನುಮತಿ ಪತ್ರದೊಂದಿಗೆ ಕೋವಿಡ್‌ಗೆ ನೆಗೆಟಿವ್ ವರದಿಯೂ ಕಡ್ಡಾಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News