×
Ad

ಕೆ.ಎಂ.ಕೆ. ಮಂಜನಾಡಿಗೆ ಯೆನೆಪೊಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Update: 2020-11-30 22:08 IST

ಉಳ್ಳಾಲ, ನ.30: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಅವರು ಪ್ರತಿಷ್ಠಿತ ಯೆನೆಪೊಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರೂ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರೂ ಆಗಿರುವ ಕೆ.ಎಂ.ಕೆ. ಮಂಜನಾಡಿ ಅವರು ಮಂಗಳೂರು ಟೀಚರ್ಸ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮುಸ್ಲಿಮ್ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News