ಕೌಶಲ್ಯ ಕರ್ನಾಟಕ ಮಾಸಪತ್ರಿಕೆ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ

Update: 2020-11-30 17:54 GMT

ಬೆಂಗಳೂರು, ನ.30: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಹೊರ ತರುವ ಕೌಶಲ್ಯ ಕರ್ನಾಟಕ ಮಾಸ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುಖ್ಯಮಂತ್ರಿಯ ಕಾರ್ಯದರ್ಶಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಈ ಮಾಸ ಪತ್ರಿಕೆಯು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳು, ಜಾಬ್ ರೋಲ್ಸ್, ಅಗತ್ಯ ಅರ್ಹತೆ, ಅವಧಿ, ವೃತ್ತಿಪರ ತರಬೇತಿ ಪಾಲುದಾರರು ಮತ್ತು ಉದ್ಯೋಗದಾತರು ಇತ್ಯಾದಿಗಳ ಮಾಹಿತಿ ಒದಗಿಸಲಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳು, ವೃತ್ತಿಪರ ತರಬೇತಿ ಸಂಸ್ಥೆಗಳು, ಉದ್ಯೋಗದಾತರು ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News