ಕರೋನಗಿಂತ ಏಡ್ಸ್ ಭಯಾನಕ ಕಾಯಿಲೆ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-12-01 12:08 GMT

ಉಡುಪಿ, ಡಿ.1: ಕರೋನಾಗಿಂತ ಏಡ್ಸ್ ಭಯಾನಕ ಕಾಯಿಲೆಯಾಗಿದೆ. ಆದರೆ ಈ ಕಾಯಿಲೆ ಬಗ್ಗೆ ನಮ್ಮಲ್ಲಿ ಅಷ್ಟು ಜಾಗೃತಿ ಇಲ್ಲ. ಕರೋನಾ ಸೋಂಕಿತರ ಪೈಕಿ ಶೇ.99.18 ಮಂದಿ ನಮ್ಮಲ್ಲಿ ಬದುಕುತ್ತಾರೆ. ಆದರೆ ಏಡ್ಸ್ ರೋಗ ಬಂದರೆ ಜೀವನಪೂರ್ತಿ ಸಂಕ ಷ್ಟಕ್ಕೆ ಒಳಗಾಗಬೇಕಾಗುತ್ತದೆ ಮತ್ತು ಸಮಾಜದಿಂದ ನಿರ್ಲರ್ಕ್ಷಕ್ಕೆ ಒಳಗಾಗಬೇಕಾಗುತ್ತದೆ. ಆದುದರಿಂದ ಈ ಬಗ್ಗೆ ಹೆಚ್ಚಿನ ರೀತಿಯಲ್ಲಿ ಈ ಜಾಗೃತಿ ಮೂಡಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉದ್ಯಾವರ ಶ್ರೀಧರ್ಮಸ್ಥಳ ಮಂಜು ನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್ನೆಸ್ಸೆಸ್ ಘಟಕ, ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಜಿಲ್ಲಾಸ್ಪತ್ರೆ ನಾಗರಿಕರ ಸಹಾಯವಾಣಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಪುರಭವನದಲ್ಲಿ ಮಂಗಳವಾರ ಆಯೋಜಿಸಲಾದ ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಏಡ್ಸ್ ರೋಗದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಈ ಕಾಯಿಲೆಗೆ ಬಲಿಯಾಗುವ ವರ ಸಂಖ್ಯೆಯನ್ನು ತಡೆಯಬಹುದಾಗಿದೆ. ಸರಕಾರ ಕೂಡ ಎಚ್‌ಐವಿ ಪೀಡಿತ ರಿಗೆ ಸಾಕಷ್ಟು ಯೋಜನೆ ಗಳನ್ನು ಹಮ್ಮಿಕೊಂಡಿದೆ. ಅದನ್ನು ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತಲುಪಿಸುವ ಮೂಲಕ ಅವರಿಗೆ ಗೌರವಯುತ ಜೀವನ ನಡೆಸಲು ಪ್ರಯತ್ನಿಸಬೇಕು ಎಂದರು.

ಏಡ್ಸ್ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಗೊಳಿಸಿರುವುದರಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನಗಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಜಿಲ್ಲೆ ಪಡೆದುಕೊಂಡಿದೆ. ದ್ವಿತೀಯ ಸ್ಥಾನ ಬಾಗಲಕೋಟೆ ಮತ್ತು ತೃತೀಯ ಸ್ಥಾನವನ್ನು ಕೊಪ್ಪಳ ಜಿಲ್ಲೆ ಪಡೆದುಕೊಂಡಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವಹಿಸಿದ್ದರು. ಕ್ಷಯ ರೋಗ ಪತ್ತೆ ಹಚ್ಚುವ ಆಂದೋಲನದ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು. ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಇದೆೀ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವೆಗಳ ಪ್ರಾಧಿ ಕಾರದ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.

ಕೋವಿಡ್-19 ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿಶೇಷ ಅಧಿಕಾರಿ ಡಾ.ಪ್ರೇಮಾ ನಂದ ಸ್ವಾಗತಿಸಿದರು. ಇದಕ್ಕೂ ಮುನ್ನ ಉಡುಪಿ ಸರ್ವಿಸ್ ಬಸ್ ನಿಲ್ದಾಣದಿಂದ ಪುರಭವನದವರೆಗೆ ನಡೆದ ಜಾಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಚಾಲನೆ ನೀಡಿದರು.

ಒಬ್ಬರಿಗೆ ಕೊರೋನ ಬಂದರೆ ಎಲ್ಲರಿಗೂ ಪರೀಕ್ಷೆ !

ಜಿಲ್ಲೆಯಲ್ಲಿ ಕೊರೋನ ಎರಡನೆ ಅಲೆ ತಡೆಯುವ ನಿಟ್ಟಿನಲ್ಲಿ ನಿರ್ಲಕ್ಷ ವಹಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಜಿಲ್ಲಾ ಡಳಿತ ಸಜ್ಜಾಗಿದೆ. ಮದುವೆ ಸೇರಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾರಿ ಗಾದರೂ ಒಬ್ಬರಿಗೆ ಕೊರೋನ ಬಂದರೆ, ಆ ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲರನ್ನು ಪ್ರಾಥಮಿಕ ಸಂಪರ್ಕಿತರು ಎಂಬುದಾಗಿ ಪರಿಗಣಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಯಂತ್ರಣ ಮಾಡುವುದು ತುಂಬಾ ಕಷ್ಟ ಆಗಲಿದೆ ಎಂು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಯಾವುದೇ ಸರುಕ್ಷಿತ ಅಂತರ, ಮಾಸ್ಕ್ ಧರಿಸದೆ ಮಲ್ಪೆ ಬೀಚ್‌ನಲ್ಲಿ ಸಾವಿ ರಾರು ಮಂದಿ ಸೇರುತ್ತಿದ್ದಾರೆ. ಜನ ಕೊರೋನಾದ ಬಗ್ಗೆ ಜ್ಞಾನ ಇಲ್ಲದ ರೀತಿ ಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಕೊರೋನಾದಿಂದ ನಾವು ಸಾಕಷ್ಟು ಮಹನೀಯ ರನ್ನು ಕಳೆದು ಕೊಂಡರೂ ನಮಗೆ ಬುದ್ದಿ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News