ಮೀನುಗಾರರ, ಮೀನು ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

Update: 2020-12-01 12:10 GMT

ಉಡುಪಿ, ಡಿ.1: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ನೇತೃತ್ವ ದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು

ಧರಣಿಯನ್ನುದ್ದೇಶಿಸಿ ಮಾತನಾಡಿದ ಮೀನುಗಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಶಂಕರ್, ಮೀನುಗಾರ ಮತ್ತು ಮೀನು ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಕಲ್ಯಾಣ ಮಂಡಳಿ ರಚಿಸಬೇಕು. ಮೀನು ಕಾರ್ಮಿಕರಿಗೆ ಇಲಾಖೆಯಿಂದ ಗುರುತಿನ ಚೀಟಿ, ಪಿಂಚಣಿ, ಅಪಘಾತ ಪರಿಹಾರ ಕೊಡಲು ಕ್ರವುವಹಿಸ ಬೇಕು ಎಂದು ಆಗ್ರಹಿಸಿದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿಬದಿಯಲ್ಲಿ ಮೀನು ವ್ಯಾಪಾರ ಮಾಡುವ ಮಹಿಳೆಯರಿಗೆ ಶೆಡ್‌ಗಳನ್ನು ನಿರ್ಮಿಸಿ, ಉದ್ಯೋಗ ಭದ್ರತೆ ಜೊತೆ ಸೈಕಲ್, ಬೈಕ್‌ಗಳಲ್ಲಿ ಮೀನು ಮಾರಾಟ ಮಾಡಲು ಅವಕಾಶ ನೀಡಬೇಕು. ಮೀನು ಮಾರುಕಟ್ಟೆ ಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಮಣಿಪಾಲ ದಲ್ಲಿ ಮೀನು ಮಾರುಕಟ್ಟೆಯನ್ನು ಸರಕಾರಿ ಜಾಗದಲ್ಲಿ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ಕೋಣಿ ಮಾತನಾಡಿ, ಮೀನು ಗಾರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಧಿಕಾರಿಗಳ ಹಾಗೂ ಮೀನುಗಾರರ ಸಂಘದ ಮುಖಂಡರ ಜಂಟಿ ಸಭೆಯನ್ನು ಕೂಡಲೇ ಕರೆಯಬೇಕು ಎಂದು ಆಗ್ರಹಿಸಿದರು.

ಬಳಿಕ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಲ್ಲಿಸಲಾಯಿತು. ಧರಣಿಯಲ್ಲಿ ಸಿಐಟಿಯು ಮುಖಂಡರಾದ ಸುರೇಶ್ ಕಲ್ಲಾಗರ್, ಎಚ್.ನರಸಿಂಹ, ಮಹಾಬಲ ವಡೇರಹೋಬಳಿ ಮಾತನಾಡಿದರು. ಮೀನುಗಾರರ ಮುಖಂಡರಾದ ಮಹೆಶ್ ಪೂಜಾರಿ, ರಿಯಾಜ್ ಬೈಕಾಡಿ, ನಜೀರ್ ಅನ್ವರ್, ಮಹಮ್ಮದ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News