ಪ.ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

Update: 2020-12-01 12:15 GMT

ಉಡುಪಿ, ಡಿ.1: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅ್ಯರ್ಥಿಗಳಿಂದ ಫೆಲೋಶಿಪ್‌ಗಾಗಿ ಅರ್ಜಿ ಗಳನ್ನು ಆಹ್ವಾನಿಸಿದೆ.

ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅಥವಾ ಇಲಾಖೆಯ ವೆಬ್‌ಸೈಟ್:https://karnatakasangeetanrityaacademy.com -ಮೂಲಕ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯುನ್ನು ಡಿಸೆಂಬರ್ 15ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News