ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಎಂ.ಫ್ರೆಂಡ್ಸ್ ಕಾರುಣ್ಯಕ್ಕೆ ಒಂದು ತಿಂಗಳ ಪ್ರಾಯೋಜಕತ್ವ

Update: 2020-12-01 13:37 GMT

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಮಂಗಳೂರು ಬಂಟ್ಸ್ ಹಾಸ್ಟೆಲ್ ಮೈದಾನದಲ್ಲಿ ಮಂಗಳವಾರ ನಡೆದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಜಕತ್ವದ ಎರಡು ಲಕ್ಷ ಇಪ್ಪತ್ತೈದು ಸಾವಿರ ರೂ. ಚೆಕ್ ನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ವಿತರಿಸಿದರು.

ಎಂ.ಫ್ರೆಂಡ್ಸ್ ಕಾರುಣ್ಯ ಯೋಜನೆಯಡಿ ಮಂಗಳೂರಿನ ಸರಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಶಕ್ತ ರೋಗಿಗಳ ನೂರಾರು ಜೊತೆಗಾರರಿಗೆ ದಿನನಿತ್ಯ ರಾತ್ರಿಯ ಭೋಜನವನ್ನು ಕಳೆದ 3 ವರ್ಷಗಳಿಂದ ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆಗೆ ಪ್ರತಿವರ್ಷ ಜಾಗತಿಕ ಬಂಟರ ಸಂಘ ಒಂದು ತಿಂಗಳ ಪ್ರಾಯೋಜಕತ್ವ ನೀಡುತ್ತಿದೆ. ಎಂ.ಫ್ರೆಂಡ್ಸ್ ಸ್ಥಾಪಕ ಮತ್ತು ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಅವರನ್ನು ಶಾಲು ಹೊದಿಸಿ ಗೌರವಿಸಿ, ಪ್ರಾಯೋಜಕತ್ವದ ಚೆಕ್ ನ್ನು ಐಕಳ ಹರೀಶ್ ಶೆಟ್ಟಿ ಅವರು ವಿತರಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಎಂ.ಫ್ರೆಂಡ್ಸ್ ಟ್ರಸ್ಟಿ ಹಮೀದ್ ಅತ್ತೂರು, ಕಾರ್ಯದರ್ಶಿ ಆರಿಫ್ ಪಡುಬಿದ್ರಿ, ಸದಸ್ಯರಾದ ಮಹಮ್ಮದ್ ಟಿ.ಕೆ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News