ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2020-12-01 13:46 GMT

ಉಡುಪಿ, ಡಿ.1: ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ -https://dom.karnataka.gov.in -ಅಥವಾ ತಾಲೂಕುಗಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ದೂರವಾಣಿ ಸಂಖ್ಯೆ:0820-2574596 (ಉಡುಪಿ), 08254-230370 (ಕುಂದಾಪುರ), 08258-231101(ಕಾರ್ಕಳ)ವನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News