ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ

Update: 2020-12-01 13:48 GMT

ಉಡುಪಿ, ಡಿ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ವಿಕಲಚೇತನರ ಸಂಘಟನೆ ಗಳು ಹಾಗೂ ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯು ಡಿ.3ರಂದು ಬೆಳಗ್ಗೆ 10:30ಕ್ಕೆ ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿ ತರಿರುವರು. ಉಡುಪಿ ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿ ತರಿರುವರು. ಉಡುಪಿ ಶಾಸಕ ಕೆ. ರಘುಪತಿ ಭಟ್ ‌ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News