'ಬಾಬರಿ ಮಸ್ಜಿದ್' ವಿಷಯದಲ್ಲಿ ಪ್ರಬಂಧ ಸ್ಪರ್ಧೆ: ಕ್ಯಾಂಪಸ್ ಫ್ರಂಟ್ ನಾಯಕನ ವಿರುದ್ಧ ಎಫ್ಐಆರ್

Update: 2020-12-01 15:33 GMT

ಗಂಗಾವತಿ, ಡಿ.1: ಬಾಬರಿ ಮಸ್ಜಿದ್ ವಿಷಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಕಾರಣಕ್ಕಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಚಾಂದ್ ಸಲ್ಮಾನ್ ವಿರುದ್ಧ ಗಂಗಾವತಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಬರಿ ಮಸ್ಜಿದ್ ವಿಚಾರವಾಗಿ ಯಾವುದೇ ಸಮಸ್ಯೆಯಿದ್ದರೂ ಕಾನೂನು ಪರಿಧಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಸಾರ್ವಜನಿಕವಾಗಿ ಚರ್ಚಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ಇರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಪೋಲಿಸರ ಈ ನಡೆಯನ್ನು ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿಯು ಖಂಡಿಸಿದೆ. ಬಾಬರಿ ಮಸೀದಿಯನ್ನು ನೆನಪಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯು ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿದೆ. ಇತಿಹಾಸವನ್ನು ನೆನಪಿಸವುದರಲ್ಲಿ ತಪ್ಪೇನಿಲ್ಲ. ಇದನ್ನು ಸಹಿಸದ ಪೋಲಿಸರು ನಮ್ಮ ಗಂಗಾವತಿ ಜಿಲ್ಲಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೋಲಿಸರ ಈ ನಡೆಯ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಮತ್ತು ಈ ಅಭಿಯಾನನ್ನು ರಾಜ್ಯಾದ್ಯಂತ ತಲುಪಿಸಲಿದ್ದೇವೆ ಎಂದು ಸಿಎಫ್ಐ ರಾಜ್ಯ ಕೋಶಾಧಿಕಾರಿ ಇಮ್ರಾನ್ ಮಾಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಬರಿ ನೆನಪು ಎಂಬ ಹೆಸರಿನಲ್ಲಿ ಪಿಯುಸಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಉರ್ದುವಿನಲ್ಲಿ ಪ್ರಬಂಧ ಸ್ಪರ್ಧೆಯನ್ನು ಮತ್ತು ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಕ್ಯಾಂಪಸ್ ಫ್ರಂಟ್ ಕರ್ನಾಟಕ ವತಿಯಿಂದ ಏರ್ಪಡಿಸಲಾಗಿದೆ ಮತ್ತು ವಿಜೇತರಿಗೆ ಬಹುಮಾನವನ್ನು ನೀಡಲಾಗವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News