×
Ad

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾ

Update: 2020-12-01 21:49 IST

ಬೆಂಗಳೂರು, ಡಿ.1: ಡಿಜೆ, ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಜಾಮೀನು ನೀಡುವಂತೆ ಸಂಪತ್ ರಾಜ್ ಅವರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಮಂಗಳವಾರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಸಂಪತ್ ರಾಜ್‍ಗೆ ಕಾನೂನು ಸಮರದಲ್ಲಿ ಹಿನ್ನಡೆಯುಂಟಾಗಿದೆ. ಜಾಮೀನು ಕೋರಿ ಹೈಕೋರ್ಟಿಗೆ ಮೊರೆ ಹೋಗುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News