×
Ad

ದಿಲ್ಲಿಯ ಟಿಕ್ರಿ ಗಡಿಯಲ್ಲಿ ವಾಹನ ಸಂಚಾರ ಬಂದ್

Update: 2020-12-01 23:55 IST

ಹೊಸದಿಲ್ಲಿ, ಡಿ.1: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಟಿಕ್ರಿ ಗಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದುಸುರಾಯ್ ಮತ್ತು ಝಟಿಕಾರ ಗಡಿಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಮಾತ್ರ ಅನುಮತಿಯಿದೆ ಎಂದು ದಿಲ್ಲಿ ಟ್ರಾಫಿಕ್ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಈ ಮಧ್ಯೆ, ಕಳೆದ ವಾರ ಸಿಂಘು ಗಡಿಭಾಗದಲ್ಲಿ ರೈತರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಘರ್ಷಣೆಗೆ ಸಂಬಂಧಿಸಿ ಆಲಿಪುರ್ ಪೊಲೀಸ್ ಠಾಣೆಯಲ್ಲಿ ಅಜ್ಞಾತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮಧ್ಯೆ, ಉತ್ತರಪ್ರದೇಶದ ಬುಂದೇಲ್‌ಖಂಡದ ಸುಮಾರು 500 ರೈತರು ದಿಲ್ಲಿ ಚಲೋ ಜಾಥದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬುಂದೇಲ್‌ಖಂಡ ಕಿಸಾನ್ ಯೂನಿಯನ್‌ನ ಅಧ್ಯಕ್ಷ ವಿಮಲ್ ಶರ್ಮ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News