ಮಂಗಳೂರು : ಮೀನುಗಾರಿಕೆ ಸ್ಥಗಿತಗೊಳಿಸಲು ಒತ್ತಾಯಿಸಿ ಪ್ರತಿಭಟನೆ

Update: 2020-12-02 04:01 GMT

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಶ್ರೀ ರಕ್ಷ ಎಂಬ ಬೋಟು ಆಳ ಸಮುದ್ರದಲ್ಲಿ ಮುಳುಗಿ ಸುಮಾರು ಆರು ಜನರು ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ನಾಲ್ಕು ಮಂದಿ ಪತ್ತೆಯಾಗದೆ ಯಾವುದೇ ರೀತಿಯ ಮೀನುಗಾರಿಕೆ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಬೆಂಗರೆ ನಾಗರಿಕರು ಮಧ್ಯ ರಾತ್ರಿ ದಿಢೀರ್‌ ಶಾಂತಿಯುತ ಪ್ರತಿಭಟನೆ ಮಾಡಿದರು.

ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಕರಾವಳಿ ರಕ್ಷಣಾ ಪಡೆ ಯಾವುದೇ ರೀತಿಯ ಶೋಧನೆಯನ್ನು ನಡೆಸದೆ ಸ್ಥಳೀಯವಾಗಿ ಇತರ ಮೀನುಗಾರರು, ಮುಳುಗು ತಜ್ಞರು ಮಾಡಿದ ಕೆಲಸವನ್ನು ನಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.

ತಮ್ಮ ಜೀವದ ಹಂಗು ತೊರೆದು ‌ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುತ್ತಾರೆ, ಇಲ್ಲಿ ಮೀನುಗಾರನಿಗೆ ಯಾವುದೇ ಸೌಲಭ್ಯ ಒದಗಿಸಿದೆ ನಿರ್ಲಕ್ಷ್ಯ ವಹಿಸಲಾಗಿದೆ ಆದುದರಿಂದ ಇಂತಹ ದುರಂತಗಳು ಸಂಭವಿಸಿದ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕೆ ಸಂಘದ ವತಿಯಿಂದ ಯಾವುದೇ ಸಹಕಾರ ದೊರೆಯುವುದಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿ ಕೊಂಡಿದ್ದಾರೆ ಎಂದು ಸ್ಥಳೀಯ ನಗರ ಪಾಲಿಕೆ ಸದಸ್ಯ ಮುನೀಬ್ ಬೆಂಗರೆ ಈ ಸಂಧರ್ಭದಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News