ಮಹಿಂದ್ರಾ ಸ್ಕಾರ್ಪಿಯೊ ಮೇಲೆ ಟ್ರಕ್ ಉರುಳಿ ಬಿದ್ದು ಕನಿಷ್ಠ 8 ಮಂದಿ ಮೃತ್ಯು

Update: 2020-12-02 05:29 GMT

 ಲಕ್ನೊ:ಮರಳು ತುಂಬಿದ್ದ ಟ್ರಕ್‌ವೊಂದು ನಿಂತಿದ್ದ ಮಹಿಂದ್ರಾ ಸ್ಕಾರ್ಪಿಯೊ ಮೇಲೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದೆ.

10 ಮಂದಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಸ್ಕಾರ್ಪಿಯೊದಲ್ಲಿ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ 8 ಮಂದಿ ಟ್ರಕ್‌ನ ಅಡಿಬಿದ್ದು ಮೃತಪಟ್ಟಿದ್ದರೆ, ಉಳಿದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಪಡೆ ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಕೌಶಂಬಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

 ಘಟನೆಯ ಕುರಿತು ಮಾಹಿತಿ ಪಡೆದಿರುವ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಸಂತ್ರಸ್ತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಪರಿಹಾರ ನೀಡಲು ನಿರ್ದೇಶನ ನೀಡಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News