ಮಾಜಿ ಉಪಕುಲಪತಿ ಮಧುಕರ್ ಅಂಗೂರ್ ಈಡಿ ವಿಚಾರಣೆಗೆ ಹಾಜರು
Update: 2020-12-02 18:29 IST
ಬೆಂಗಳೂರು, ಡಿ.2: ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮಧುಕರ್ ಅಂಗೂರ್ ಅವರು ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳ ಮುಂದೆ ಬುಧವಾರ ಹಾಜರಾದರು.
ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಮಧುಕರ್ ಅಂಗೂರ್ ಈಡಿ ಅಧಿಕಾರಿಗಳ ಮುಂದೆ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಮೌಖಿಕವಾಗಿ ಉತ್ತರಿಸಿದರು.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮಧುಕರ್ ಅಂಗೂರ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದ ಅಧಿಕಾರಿಗಳು, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡರು ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಮಧುಕರ್ ಅವರನ್ನು ವಿಚಾರಣೆ ನಡೆಸಿದ ಅಧಿಕಾರಿಗಳ ತಂಡ, ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ಹೆಚ್ಚಿನ ವಿಚಾರಣೆಗೆ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಸಮನ್ಸ್ ನೀಡಿದ್ದರು.