ಗ್ರಾಪಂ ಚುನಾವಣೆ; ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

Update: 2020-12-02 14:38 GMT

ಉಡುಪಿ, ಡಿ.2: ಜಿಲ್ಲೆಯಲ್ಲಿ ಡಿ.22ರಂದು ಮೊದಲ ಹಂತದ ಹಾಗೂ ಡಿ.27ರಂದು ಎರಡನೇ ಹಂತದ ಗ್ರಾಮಪಂಚಾಯತ್‌ಗಳ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹಾಗೂ ಡಿ.30ರಂದು ಮತಎಣಿಕೆಯ ಸಂದರ್ಭದಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿದೃಷ್ಟಿಯಿಂದ ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಪಂಗಳ ವ್ಯಾಪ್ತಿ ಯಲ್ಲಿ ಡಿ.31ರವರೆಗೆ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದು ಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಲ್ಲೆಯಲ್ಲಿ ಶಸ್ತ್ರಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮಲ್ಲಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ಠೇವಣಿ ಮಾಡಿ ರಸೀದಿ ಪಡೆಯಬೇಕು.

ಈ ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ/ ಆಯುಧ ಮತ್ತು ಮದ್ದುಗುಂಡು ಗಳ ಸಂಗ್ರಹ, ಬಳಕೆ, ಸಾಗಾಟ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News