×
Ad

ಬೆಂಗಳೂರು: ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ನೌಕರ ಆತ್ಮಹತ್ಯೆ

Update: 2020-12-02 20:11 IST

ಬೆಂಗಳೂರು, ಡಿ.2: ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ನೌಕರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ‌.

ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದಲ್ಲಿನ ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ಈ ಘಟನೆ ನಡೆದಿದ್ದು, ನಾಗರಾಜ್ ​(33) ಮೃತ ನೌಕರ ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ಈ ಘಟನೆ ಬೆಳಕಿಗೆ ಬಂದಿದ್ದು, ನಾಗರಾಜ್​​ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News