×
Ad

ಕೋವಿಡ್ ನಿಯಮ ಉಲ್ಲಂಘನೆ: ದಂಡ ವಿಧಿಸಲು ಅಧಿಕಾರಿಗಳ ನೇಮಕ

Update: 2020-12-02 20:12 IST

ಉಡುಪಿ, ಡಿ.2: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸದೆ, ಸುರಕ್ಷಿತಾ ಅಂತರ ಕಾಪಾಡದೇ, ನಿಯಮಗಳನ್ನು ಪಾಲನೆ ಮಾಡದೇ ಇರುವ ಬಗ್ಗೆ ರಕಾರದ ಅಧಿಸೂಚನೆಯಲ್ಲಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 200 ರೂ. ಮತ್ತು ಇತರೆ ಕಡೆಗಳಲ್ಲಿ 100 ರೂ. ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪೋಲೀಸ್ ಸಬ್‌ಇನ್ಸ್‌ಪೆಕ್ಟರ್ ಹಾಗೂ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃಧ್ದಿ ಅಧಿಕಾರಿಗಳು, ನಗರಸಭೆ ಪೌರಾ ಯುಕ್ತರು, ನಗರಸಭೆ ಆರೋಗ್ಯ ನಿರೀಕ್ಷಕರು, ಕುಂದಾಪುರ ಉಪವಿಭಾಗಾಧಿಕಾರಿ, ಎಲ್ಲಾ ತಾಲೂಕಿನ ತಹಶೀಲ್ದಾರರು, ಪುರಸಭೆ ಮುಖ್ಯಾಧಿಕಾರಿಗಳು ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಕರು ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ಎಲ್ಲಾ ಹೋಬಳಿಯ ರಾಜಸ್ವ ನಿರೀಕ್ಷಕರಿಗೆ, ಸಹಾಯಕ ಪೊಲೀಸ್ ಉಪನಿರೀಕ್ಷಕರು ಮತ್ತು ಅಬಕಾರಿ ಉಪ ನಿರೀಕ್ಷಕರು ಹಾಗೂ ಮೇಲ್ಪಟ್ಟ ಅಬಕಾರಿ ಆಧಿಕಾರಿಗಳಿಗೆ ಈ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಕೋವಿಡ್-19 ನಿಯಂತ್ರಣ ಸಂಬಂಧ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರ ಕಾಪಾಡುವ ಸಮಯದಲ್ಲಿ ತೀರಾ ಅಸಡ್ಡೆ ತೋರುತ್ತಿರುವುದನ್ನು ಗಮನಿಸಲಾಗಿದೆ. ಇದರಿಂದಾಗಿ ಕೋವಿಡ್-19 ಮತ್ತೊಮ್ಮೆ ಹೆಚ್ಚಾಗುವ ಸಂಭವವಿದೆ. ಇಂತಹ ಪ್ರವೃತ್ತಿಗೆ ಕಡಿ ವಾಣ ಹಾಕುವುದು ಅವಶ್ಯಕವಾಗಿರುವ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಜಿಲ್ಲೆಯ ಈ ಕೆಳಗಿನ ಅಧಿಕಾರಿಗಳಿಗೂ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ.

ಎಲ್ಲಾ ಮೀನುಗಾರಿಕಾ ಸಹಾಯಕ ನಿರ್ದೇಶಕರು ಶ್ರೇಣಿ 1ಮತ್ತು 2 ಹಾಗೂ ಮೇಲ್ಪಟ್ಟ ಆಧಿಕಾರಿಗಳು, ಜಿಲ್ಲೆಯ ಎಲ್ಲಾ ಬಂದರು ಸಹಾಯಕ ನಿರ್ದೇಶಕರು ಶ್ರೇಣಿ 1 ಮತ್ತು 2 ಹಾಗೂ ಮೇಲ್ಪಟ್ಟ ಆಧಿಕಾರಿ, ಮಲ್ಪೆ ಹಾಗೂ ಕುಂದಾಪುರ ಉಪ ಬಂದರು ಸಂರಕ್ಷಣಾಧಿಕಾರಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೆಶಕರು, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಜಿಲ್ಲಾ ಸಾರಿಗೆ ಇಲಾಖೆಯ ಎಲ್ಲಾ ವಾಹನ ನಿರೀಕ್ಷಕರು, ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ಕುಂದಾಪುರ, ಕಾರ್ಕಳ, ಉಡುಪಿಯ ಎಪಿಎಂಸಿ ಇವರಿಗೂ ಸಹ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರವನ್ನು ಪ್ರತ್ಯಾಯೋಜಿಸಿ ಪರಿಷ್ಕರಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News