×
Ad

ಡಿ.3: ಮಲ್ಪೆ ಸೀ-ವಾಕ್ ಬಳಿ ಬಯಲು ರಂಗಮಂದಿರ ಉದ್ಘಾಟನೆ

Update: 2020-12-02 20:13 IST

ಉಡುಪಿ, ಡಿ.2: ಜಿಲ್ಲಾಡಳಿತ, ಮಲ್ಪೆ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಮಲ್ಪೆ ಸೀ-ವಾಕ್ ಬಳಿ ನಿರ್ಮಿಸಲಾದ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭ ಡಿ.3ರ ಸಂಜೆ 5:30ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News