ಉಡುಪಿ ಜಿಲ್ಲೆಯಲ್ಲಿ 15 ಮಂದಿಗೆ ಕೊರೋನ ಪಾಸಿಟಿವ್

Update: 2020-12-02 15:45 GMT

ಉಡುಪಿ, ಡಿ.2: ಜಿಲ್ಲೆಯಲ್ಲಿ ಬುಧವಾರ 15 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 21 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಒಟ್ಟು 191 ಮಂದಿ ಇನ್ನೂ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರು. ಇವರಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆ ಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 9, ಕುಂದಾಪುರ ತಾಲೂಕಿನ 2 ಹಾಗೂ ಕಾರ್ಕಳ ತಾಲೂಕಿನ ಒಬ್ಬರು ಹಾಗೂ ಹೊರಜಿಲ್ಲೆಯ ಮೂವರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

21 ಮಂದಿ ಗುಣಮುಖ:  ಮಂಗಳವಾರ ಜಿಲ್ಲೆಯಲ್ಲಿ 21 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,341 ಆಗಿದೆ. ಜಿಲ್ಲೆಯಲ್ಲಿ ಸದ್ಯ 191 ಮಂದಿ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

1798 ನೆಗೆಟಿವ್: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 1811 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1798 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 13 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,719ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಮಂಗಳವಾರದವರೆಗೆ ಒಟ್ಟು 2,49,067 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,26,348 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,719 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,341 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿ ದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News