ರಾಜ್ಯ ಸಾಕ್ಷಿಗಳ ರಕ್ಷಣೆ ನಿಧಿ ಸ್ಥಾಪಿಸಲು ಹೈಕೋರ್ಟ್ ನಿರ್ದೇಶನ

Update: 2020-12-02 17:00 GMT

ಬೆಂಗಳೂರು, ಡಿ.2: ಶಾಸಕರು, ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲುಗೊಂಡು ವಿಶೇಷ ಕೋರ್ಟ್‍ಗಳಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಲ್ಲಿನ ಪ್ರಾಸಿಕ್ಯೂಷನ್ ಪರ ಸಾಕ್ಷಿಗಳ ರಕ್ಷಣೆಗೆ ಜಾರಿಗೆ ತಂದಿರುವ ಸಾಕ್ಷಿಗಳ ರಕ್ಷಣೆ ಯೋಜನೆ-2018ನ್ನು ಪರಿಣಾಮಕಾರಿ ಜಾರಿಗೆ ತರುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಸಾಕ್ಷಿಗಳ ರಕ್ಷಣೆ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕಾದರೆ ರಾಜ್ಯ ಸಾಕ್ಷಿಗಳ ರಕ್ಷಣೆ ನಿಧಿ ಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಸರಕಾರಕ್ಕೆ ನಿರ್ದೇಶನ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News