ರಾತ್ರಿ ಕರ್ಫ್ಯೂ ವಿಧಿಸುವ ಬಗ್ಗೆ ಚಿಂತನೆ ಮಾಡಿಲ್ಲ: ಗೃಹ ಸಚಿವ ಬೊಮ್ಮಾಯಿ

Update: 2020-12-03 07:00 GMT

ಉಡುಪಿ, ಡಿ.3: ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ವಿಧಿಸುವ ಕುರಿತಂತೆ ಯಾವುದೇ ಚಿಂತನೆ ಮಾಡಿಲ್ಲ ಎಂದು ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಸೇರದಂತೆ ನೋಡಿಕೊಳ್ಳಬೇಕು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ರಾತ್ರಿ ಕರ್ಫ್ಯೂ ವಿಧಿಸದೆಯೂ ಈ ಬಗ್ಗೆ ಕ್ರಮ ಸಾಧ್ಯ. ರಾತ್ರಿ ಕರ್ಫ್ಯೂ ಜಾರಿಗೊಳಿಸುವ ಬಗ್ಗೆಯಾವುದೇ ಸಭೆ ಕರೆದಿಲ್ಲ ಎಂದವರು ಸ್ಪಷ್ಟಪಡಿಸಿದರು.

 ಹೊಸ ವರ್ಷಾಚರಣೆಯ ಸಂದರ್ಭ ಜನ ಸಂದಣಿ ಆಗದಂತೆ ನೋಡುವ ಜವಾಬ್ದಾರಿ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲವ್ ಜಿಹಾದ್ ವಿರುದ್ಧ ಕಾನೂನು

ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ಬಗ್ಗೆ ಕಾನೂನು ಬಂದೇ ಬರುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು ಯಾವ ಅಂಶಗಳನ್ನು ಸೇರಿಸಬೇಕು ಎಂಬ ಅಂಶಗಳ ಚರ್ಚೆಗಳಾಗುತ್ತಿವೆ. ಇದಕ್ಕಾಗಿ ಉತ್ತರ ಪ್ರದೇಶ ಸರಕಾರ ಹೊರಡಿಸುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News