ಕಾತ್ಯಾಯಿನಿ ಕುಂಜಿಬೆಟ್ಟುಗೆ ‘ಕನಕ ಯುವ ಪುರಸ್ಕಾರ’ ಪ್ರದಾನ

Update: 2020-12-03 12:17 GMT

ಉಡುಪಿ, ಡಿ.3: ಕರ್ನಾಟಕ ಸರಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನೀಡಲಾಗುವ ಈ ಸಾಲಿನ ಕನಕ ಯುವ ಪುರಸ್ಕಾರವನ್ನು ಉಡುಪಿಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಕನಕ ಜಯಂತಿ ಆಚರಣೆಯ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಬೈರತಿ ಬಸವರಾಜ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ರಶ್ಮಿ, ನಿರ್ದೇಶಕ ಎಸ್. ರಂಗಪ್ಪಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News