ಉಡುಪಿ : 26 ಮಂದಿಗೆ ಕೊರೋನ ಪಾಸಿಟಿವ್

Update: 2020-12-03 15:01 GMT

ಉಡುಪಿ, ಡಿ.3: ಜಿಲ್ಲೆಯಲ್ಲಿ ಗುರುವಾರ 26 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 18 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಒಟ್ಟು 199 ಮಂದಿ ಕೊರೋನ ಸೋಂಕಿಗೆ ಇನ್ನೂ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 16 ಮಂದಿ ಪುರುಷರು ಹಾಗೂ 10 ಮಂದಿ ಮಹಿಳೆಯರು. ಇವರಲ್ಲಿ 11 ಮಂದಿ ಪುರುಷರು ಹಾಗೂ ಐವರು ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 17, ಕುಂದಾಪುರ ತಾಲೂಕಿನ 7 ಹಾಗೂ ಕಾರ್ಕಳ ತಾಲೂಕಿನ ಒಬ್ಬರು ಹಾಗೂ ಹೊರಜಿಲ್ಲೆಯ ಒಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.

18 ಮಂದಿ ಗುಣಮುಖ:  ಬುಧವಾರ ಜಿಲ್ಲೆಯಲ್ಲಿ 18 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,359 ಆಗಿದೆ. ಜಿಲ್ಲೆಯಲ್ಲಿ ಸದ್ಯ 199 ಮಂದಿ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2086 ನೆಗೆಟಿವ್: ಜಿಲ್ಲೆಯಲ್ಲಿ ಬುಧವಾರ ಒಟ್ಟು 2114 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2086 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 28 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,745ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಬುಧವಾರದವರೆಗೆ ಒಟ್ಟು 2,51,181 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,28,436 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,745 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,359 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ನ.7ರ ಜಿಲ್ಲೆಯಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News