ಕಾಸರಗೋಡು : ಗ್ರನೇಡ್ ಸ್ಪೋಟ; ಇಬ್ಬರು ಪೊಲೀಸರಿಗೆ ಗಾಯ

Update: 2020-12-04 06:47 GMT

ಕಾಸರಗೋಡು :  ಗ್ರನೇಡ್ ( ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ  ನಡೆದಿದೆ.

ಗಾಯಗೊಂಡ ಸುಧಾಕರ ಹಾಗೂ ಪವಿತ್ರ ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ  ತರಬೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಗೊಂಡು  ಈ ಅವಘಡ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪೈಕಿ ಸುಧಾಕರ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ.  ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್  ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News