ಉಡುಪಿ ಜಿಲ್ಲೆಯಲ್ಲಿ 14 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

Update: 2020-12-04 13:43 GMT

ಉಡುಪಿ, ಡಿ.4: ಜಿಲ್ಲೆಯಲ್ಲಿ ಶುಕ್ರವಾರ 14 ಮಂದಿಯಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. 17 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, 196 ಮಂದಿ ಕೊರೋನ ಸೋಂಕಿಗೆ ಇನ್ನೂ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ತಲಾ 7 ಮಂದಿ ಪುರುಷರು ಹಾಗೂ ಮಹಿಳೆಯರು. ಇವರಲ್ಲಿ ನಾಲ್ವರು ಪುರುಷರು ಹಾಗೂ ಐವರು ಮಹಿಳೆಯ ರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 9, ಕುಂದಾಪುರ ತಾಲೂಕಿನ 4 ಹಾಗೂ ಕಾರ್ಕಳ ತಾಲೂಕಿನ ಒಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.

17 ಮಂದಿ ಗುಣಮುಖ:  ಗುರುವಾರ ಜಿಲ್ಲೆಯಲ್ಲಿ 17 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,376 ಆಗಿದೆ. ಜಿಲ್ಲೆಯಲ್ಲಿ ಸದ್ಯ 196 ಮಂದಿ ಕೋವಿಡ್‌ಗೆ ಸಕ್ರಿಯರಿದ್ದಾರೆ ಎಂದರು.

1656 ನೆಗೆಟಿವ್: ಜಿಲ್ಲೆಯಲ್ಲಿ ಗುರುವಾರ ಒಟ್ಟು 1673 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1656 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 17 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,759ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 2,52,854 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,30,095 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,759 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,376 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ನ.7ರ ನಂತರ ಜಿಲ್ಲೆಯಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News