ಡಿ.6 : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಲೋಚನಾ ಸಭೆ

Update: 2020-12-04 13:55 GMT

ಉಡುಪಿ, ಡಿ.4: ಮುಂಬರುವ ಗ್ರಾಪಂ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲು ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಸರ್ವ ಕಾರ್ಯಕರ್ತರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಡಿ.6ರ ರವಿವಾರ ಸಂಜೆ 4 ಗಂಟೆಗೆ ಬ್ರಹ್ಮಗಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News