×
Ad

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ಅಗತ್ಯ: ಬೊಮ್ಮಾಯಿ

Update: 2020-12-04 19:47 IST

ಉಡುಪಿ, ಡಿ. 4: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕ ವಾತಾವರಣ ಮತ್ತು ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರು ಕೈಜೋಡಿಸಬೇಕು ಎಂದು ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಣಿಪಾಲದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ, ನಿಟ್ಟೂರಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನೆ ಮತ್ತು ಮಣಿಪಾಲದಲ್ಲಿ ಇಂದಿರಾ ಗಾಂಧಿ ಮೆಟ್ರಿಕ್ ಅನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ಕಟ್ಟಡಕ್ಕೆ ಗುರುವಾರ ಶಿಲಾನ್ಯಾಸ ನೆರವೇರಿಸಿ, ಬಳಿಕ ನಿಟ್ಟೂರು ಹೈಸ್ಕೂಲ್‌ನಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ನಗರಸಭೆ ಅಧ್ಯಕ್ಷ ಸುಮಿತ್ರಾ ಆರ್.ನಾಯಕ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದಯಾನಂದ, ತಾಲೂಕು ಅಧಿಕಾರಿ ಶುಭಾ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಾಸುದೇವ ಆಚಾರ್ಯ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಲೆಯ ನಿಟ್ಟೂರು ಸ್ವರ್ಣ ಬ್ರಾಂಡ್ ಅಕ್ಕಿ ಚೀಲವನ್ನು ಸಚಿವರಿಗೆ ನೀಡಿ ಸಮ್ಮಾನಿಸಲಾಯಿತು. ನಿಟ್ಟೂರು ಹೈಸ್ಕೂಲ್ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News