ಒಂಭತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-12-04 15:19 GMT

ಬೆಂಗಳೂರು, ಡಿ.4: ರಾಜ್ಯ ಸರಕಾರವು ಒಂಭತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಹೊಣೆಗಾರಿಕೆ: ಕಂದಾಯ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಅವರನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ವರ್ಗಾವಣೆ: ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಜಿ.ಲಕ್ಷ್ಮಿಕಾಂತ ರೆಡ್ಡಿ, ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಮುಹಮ್ಮದ್ ರೋಷನ್, ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಶೇಕ್ ತನ್ವೀರ್ ಆಸಿಫ್, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಡಾ.ಕೆ.ನಂದಿನಿದೇವಿ.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಎಂ.ಪ್ರಿಯಾಂಕಾ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಎಂ.ಆರ್.ರವಿಕುಮಾರ್, ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಡಿ.ಭಾರತಿ, ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಎನ್.ಎಂ.ನಾಗರಾಜ್ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪರಮೇಶ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News