ಬಂದ್ ವೇಳೆ ಆಗುವ ನಷ್ಟಕ್ಕೆ ಆಯೋಜಕರೆ ಹೊಣೆ: ಹೈಕೋರ್ಟ್ ಎಚ್ಚರಿಕೆ

Update: 2020-12-04 15:25 GMT

ಬೆಂಗಳೂರು, ಡಿ.4: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ರಂದು ವಿವಿಧ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಂದ್‍ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ರಾಜ್ಯ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಬಂದ್ ವೇಳೆ ಬೀದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆಗಾರರಾಗುತ್ತಾರೆ. ರ‍್ಯಾಲಿ ವೇಳೆ ಕೊವೀಡ್ ಮಾರ್ಗಸೂಚಿ ಉಲ್ಲಂಘನೆಯಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ನೋಟಿಸ್ ನೀಡಿ, ಡಿ.17ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಕ್ಷಗಳಿಗೆ ನ್ಯಾಯಪೀಠ ಸೂಚನೆ ನೀಡಿದೆ. ಮಾಸ್ಕ್, ಸುರಕ್ಷಿತ ಅಂತರದ ಬಗ್ಗೆ ಪೊಲೀಸರು ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ರಾಜ್ಯ ಸರಕಾರ ಸಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News