ಕದ್ರಿ : ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಅವಕಾಶ

Update: 2020-12-04 15:33 GMT

ಮಂಗಳೂರು, ಡಿ.4: ಕೊವೀಡ್-19 ಲಾಕ್‌ಡೌನ್‌ನಿಂದಾಗಿ ಕದ್ರಿ ಜಿಂಕೆ ಉದ್ಯಾವನದ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿತ್ತು. ಇದೀಗ ಡಿಸೆಂಬರ್ ತಿಂಗಳ ಶನಿವಾರ ಮತ್ತು ರವಿವಾರ ಮಾತ್ರ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News