ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

Update: 2020-12-04 16:11 GMT

ಬೆಂಗಳೂರು, ಡಿ.4: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಸುಮನ್‍ ರಾಯ್ ಎಂಬಾತ ಕೊಲೆಯಾಗಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ಸುಮನ್‍ ರಾಯ್ ತನ್ನ ಸ್ನೇಹಿತ ರಾಜುಸರ್ಕಾರ್ ಜೊತೆ ನಿರ್ಮಾಣ ಹಂತದ ಕಟ್ಟಡ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ. ಗುರುವಾರ ರಾತ್ರಿ ಈ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಇದೇ ವೇಳೆ ರಾಜು ಸರ್ಕಾರ್, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಸುಮನ್ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.

ಘಟನೆ ಸಂಬಂಧ ಸ್ಥಳಕ್ಕೆ ಎಚ್‍ಎಎಲ್ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News