ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಸಂಜನಾ, ರಾಗಿಣಿ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಕೋರ್ಟ್ ಅನುಮತಿ

Update: 2020-12-04 16:26 GMT

ಬೆಂಗಳೂರು, ಡಿ.4: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ನಗರದ ಎನ್‍ಡಿಪಿಎಸ್ ವಿಶೇಷ ಕೋರ್ಟ್ ಅನುಮತಿ ನೀಡಿದೆ.

ಪ್ರಕರಣದಲ್ಲಿ ನಟಿಯರು ಡ್ರಗ್ಸ್ ಸೇವನೆ ಮಾಡುತ್ತಿದ್ದರೆಂಬ ಆರೋಪ ಸಂಬಂಧ ಹೆಚ್ಚಿನ ತನಿಖೆ ನಡೆಸಲು ಅವರ ಕೂದಲು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಆದರೆ, ಆರೋಪಿತ ನಟಿಯರು ಇದಕ್ಕೆ ಸಹಕರಿಸುತ್ತಿಲ್ಲ. ಹೀಗಾಗಿ, ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ನೀಡಬೇಕು ಎಂದು ಸಿಸಿಬಿ ಪೊಲೀಸರು ಪೀಠಕ್ಕೆ ಮನವಿ ಮಾಡಿದರು.

ಮನವಿ ಪುರಸ್ಕರಿಸಿರುವ ನ್ಯಾಯಪೀಠ, ಆರೋಪಿತ ನಟಿಯರ ಕೂದಲು ಸ್ಯಾಂಪಲ್ ಸಂಗ್ರಹಿಲು ತನಿಖಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News