ಚಾರ್ಮಾಡಿ ಘಾಟ್‌ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಕಾರು: ಐವರಿಗೆ ಗಾಯ

Update: 2020-12-05 07:15 GMT

ಚಿಕ್ಕಮಗಳೂರು, ಡಿ.5: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು ನೂರು ಅಡಿ ಪ್ರಪಾತಕ್ಕೆ ಉರುಳಬಿದ್ದ ಘಟನೆ ಶನಿವಾರ ಮುಂಜಾವ ನಡೆದಿದೆ. ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಐವರು ಪ್ರಯಾಣಿಸುತ್ತಿದ್ದ ಕಾರು ಇಂದು ಮುಂಜಾವ 3 ಗಂಟೆ ಸುಮಾರಿಗೆ ಆಲೆಕಾನ್, ಬಿದ್ರು ತಳ ಮಧ್ಯ ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಇದರಿಂದ ಇಬ್ಬರು ಪ್ರಯಾಣಿಕರಿಗೆ ತೀವ್ರತರದ ಗಾಯಗಳಾಗಿದ್ದರೆ, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ರಸ್ತೆ ಬದಿ ತಡೆಗೋಡೆ ಇಲ್ಲದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿ ರಕ್ಷಣೆ ಮಾಡಿದ ಸಮಾಜ ಸೇವಕ ಆರಿಫ್ ಮತ್ತು ಪೊಲೀಸ್ ಸಚಿನ್, ಹಾಗೂ ಅರಣ್ಯ ಸಿಬ್ಬಂದಿ ಬಸವರಾಜ್ ಎಂಬವರು ಧಾವಿಸಿ ಅಪಘಾತಕ್ಕೀಡಾದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News