ಪುತ್ತೂರು : ರಸ್ತೆ ಅಪಘಾತಕ್ಕೆ ಓರ್ವ ಬಲಿ, ಇಬ್ಬರಿಗೆ ಗಂಭೀರ ಗಾಯ

Update: 2020-12-05 13:36 GMT

ಪುತ್ತೂರು: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಂಬೈಲು ಸಮೀಪ  ‌ಶನಿವಾರ ಸಂಜೆ ನಡೆದಿದೆ.

ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಹೆಚ್ಚಿನ ‌ಮಾಹಿತಿ ಲಭ್ಯವಾಗಿಲ್ಲ. ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News