×
Ad

ಡಿ.6: ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನ: ನೂತನ ಪದಾಧಿಕಾರಿಗಳ ಪದಗ್ರಹಣ

Update: 2020-12-05 19:24 IST

ಬೆಂಗಳೂರು, ಡಿ. 5: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಹಾಗೂ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭವನ್ನು ನಾಳೆ(ಡಿ.6) ಬೆಳಗ್ಗೆ 10:30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ.

ಸಮಾರಂಭದ ಸಾನಿಧ್ಯವನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ವಹಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಉಪನ್ಯಾಸ ನೀಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ.ಡಿ.ಚನ್ನಣ್ಣನವರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News