ಕುಡುಬಿ ಜನಾಂಗವನ್ನು ಎಸ್ಟಿಗೆ ಸೇರಿಸಲು ಆಯೋಗದಿಂದ ವರದಿ: ಜಯಪ್ರಕಾಶ್ ಹೆಗ್ಡೆ

Update: 2020-12-05 14:26 GMT

ಕುಂದಾಪುರ, ಡಿ.5: ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಮಾಜ ಕಲ್ಯಾಣ ಇಲಾಖೆಗೆ ವರದಿ ಕೊಡಲಾಗುವುದು ಎಂದು ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕರೆದ ಸೆಯಲ್ಲಿ ಅವರು ಮಾತನಾಡುತಿದ್ದರು.

ಈ ಹಿಂದೆ ಕುಂದಗನ್ನಡ ಅಧ್ಯಯನ ಪೀಠ ರಚನೆ ಮಾಡುವ ಬಗ್ಗೆ ವಿ.ವಿ. ಉಪ ಕುಲಪತಿಗಳಿಗೆ ಪತ್ರ ಬರೆದಿದ್ದೆ. ಅದಕ್ಕೆ ಸ್ಪಂದಿಸಿರುವ ಉಪ ಕುಲಪತಿ ಆ ಸಂಬಂಧ ಮಾಹಿತಿಯನ್ನು ಕೇಳಿದ್ದಾರೆ. ಈ ಪೀಠ ರಚನೆಯಾದರೆ ತುಳುವಿನಂತೆ ಕುಂದಾಪುರ ಕನ್ನಡದ ಅಧ್ಯಯನಕ್ಕೂ ಅನುಕೂಲವಾಗಲಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕುಂದಾಪುರ ತಾಲೂಕಿನಲ್ಲಿರುವ ಎಲ್ಲ ವಿದ್ಯಾರ್ಥಿ ನಿಲಯಗಳಿಗೆ ಶೀಘ್ರ ಭೇಟಿ ನೀಡಿ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅಲ್ಲಿನ ಕುಂದುಕೊರತೆಗಳ ಪರಿಹಾರಕ್ಕೆ ಆಯೋಗದಿಂದ ಸಂಬಂಧಿಸಿದವರಿಗೆ ಪತ್ರ ಬರೆಯಲಾಗುವುದು ಎಂದು ಅವರು ತಿಳಿಸಿದರು.

ಪದವಿ ಕಾಲೇಜುಗಳು ಆರಂಭಗೊಂಡಿರುವುದರಿಂದ ಈಗಾಗಲೇ ಕೆಲವು ಹಾಸ್ಟೆಲ್‌ಗಳನ್ನು ತೆರೆಯಲಾಗಿದೆ. ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಆರಂಭ ವಾಗುವ ಮೊದಲೇ ವಸತಿ ನಿಲಯಗಳನ್ನು ಸುಸಜ್ಜಿತವಾಗಿಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಪುರಸಭೆ ಮುಖ್ಯಾಧಿಕಾರಿ ಕೆ.ಗೋಪಾಲಕೃಷ್ಣ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಕುಂದಾ ಪುರದ ವಲಯ ಅರಣ್ಯಾಕಾರಿ ಪ್ರಭಾಕರ್ ಕುಲಾಲ್ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನರಸಿಂಹ ೂಜಾರಿ ಕಾರ್ಯ ಕ್ರಮ ನಿರೂಪಿಸಿದರು.

ಖಾಲಿ ಹುದ್ದೆ ಭರ್ತಿಗೆ ಕ್ರಮ

ಕುಂದಾಪುರ ತಾಲೂಕಿನಲ್ಲಿ ಒಟ್ಟು 85 ವಸತಿ ನಿಲಯಗಳಿದ್ದು, ಅವುಗಳಲ್ಲಿ 50 ಕಡೆಗಳಲ್ಲಿ ಹುದ್ದೆ ಭರ್ತಿಯಾಗಿದ್ದು, 35 ಕಡೆಗಳಲ್ಲಿ ಮೇಲ್ವಿಚಾರ ಕರ ಹುದ್ದೆ ಖಾಲಿ ಇದೆ. ಅದರಲ್ಲೂ 8 ವಿದ್ಯಾರ್ಥಿನಿ ನಿಲಯಗಳಲ್ಲಿ ಹೆಚ್ಚಿನ ಹುದ್ದೆ ಖಾಲಿ ಇದೆ. ಇವುಗಳ ಭರ್ತಿಗೆ ಸಂಬಂಧಪಟ್ಟ ಸಚಿವರು, ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

94 ಸಿ ಅಡಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿವೇಶನದ ಹಕ್ಕು ಪತ್ರ ಪಡೆಯಲು ಮೀಸಲು ಅರಣ್ಯ ಪ್ರದೇಶ ತೊಡಕಾಗಿದೆ. ಈ ಸಂಬಂಧ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಸಮನ್ವಯ ಸಾಧಿಸಿಕೊಂಡು ಸಮಸ್ಯೆ ಪರಿಹರಿಸೇಕಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News