ಉಡುಪಿ: 14 ಮಂದಿಗೆ ಕೊರೋನ ಪಾಸಿಟಿವ್

Update: 2020-12-05 14:54 GMT

ಉಡುಪಿ, ಡಿ.5: ಜಿಲ್ಲೆಯಲ್ಲಿ ಶನಿವಾರವೂ 14 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 27 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, 183 ಮಂದಿ ಕೊರೋನ ಸೋಂಕಿಗೆ ಇನ್ನೂ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ ಪುರುಷರು ಹಾಗೂ ನಾಲ್ವರು ಮಹಿಳೆಯರು. ಇವರಲ್ಲಿ ಐವರು ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 5, ಕುಂದಾಪುರ ತಾಲೂಕಿನ 5 ಹಾಗೂ ಕಾರ್ಕಳ ತಾಲೂಕಿನ ಮೂವರು ಹಾಗೂ ಹೊರಜಿಲ್ಲೆಯ ಒಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.

27 ಮಂದಿ ಗುಣಮುಖ:  ಶುಕ್ರವಾರ ಜಿಲ್ಲೆಯಲ್ಲಿ 27 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,403 ಆಗಿದೆ. ಜಿಲ್ಲೆಯಲ್ಲಿ ಸದ್ಯ 187 ಮಂದಿ ಕೋವಿಡ್‌ಗೆ ಸಕ್ರಿಯರಿದ್ದಾರೆ ಎಂದರು.

1891 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 1908 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1891 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 17 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,773ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಒಟ್ಟು 2,54,762 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,31,989 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,773 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,403 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ನ.7ರ ನಂತರ ಜಿಲ್ಲೆಯಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News