ರಾಜ್ಯದಲ್ಲಿ 8.91 ಲಕ್ಷ ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ: 25 ಸಾವಿರದಷ್ಟು ಸಕ್ರಿಯ ಪ್ರಕರಣಗಳು

Update: 2020-12-05 16:06 GMT

ಬೆಂಗಳೂರು, ಡಿ.5: ರಾಜ್ಯದಲ್ಲಿ ಶನಿವಾರ 1,325 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 12 ಜನರು ಸೋಂಕಿಗೆ ಬಲಿಯಾಗಿದ್ದು, 1400 ಜನರು ಗುಣಮುಖರಾಗಿದ್ದಾರೆ. ರಾಜ್ಯ ವ್ಯಾಪ್ತಿಯಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 8,91,685ಕ್ಕೆ ತಲುಪಿದ್ದು, 278 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 11,846ಕ್ಕೆ ತಲುಪಿದ್ದು, ಅನ್ಯಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 24959ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

12 ಸೋಂಕಿತರು ಬಲಿ: ಬೆಂಗಳೂರು ನಗರ 6, ಬಳ್ಳಾರಿ, ಕೋಲಾರ, ಚಿತ್ರದುರ್ಗ, ಉತ್ತರ ಕನ್ನಡ, ಕೊಪ್ಪಳ, ದಾವಣಗೆರೆಯಲ್ಲಿ ತಲಾ ಒಬ್ಬರು  ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,325 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 12, ಬಳ್ಳಾರಿ 23, ಬೆಳಗಾವಿ 45, ಬೆಂಗಳೂರು ಗ್ರಾಮಾಂತರ 23, ಬೆಂಗಳೂರು ನಗರ 709, ಬೀದರ್ 4, ಚಾಮರಾಜನಗರ 13, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 42, ಚಿತ್ರದುರ್ಗ 8, ದಕ್ಷಿಣಕನ್ನಡ 37, ದಾವಣಗೆರೆ 9, ಧಾರವಾಡ 25, ಗದಗ 11, ಹಾಸನ 36, ಹಾವೇರಿ 1, ಕಲಬುರ್ಗಿ 15, ಕೊಡಗು 18, ಕೋಲಾರ 22, ಕೊಪ್ಪಳ 3, ಮಂಡ್ಯ 24, ಮೈಸೂರು 55, ರಾಯಚೂರು 29, ರಾಮನಗರ 6, ಶಿವಮೊಗ್ಗ 17, ತುಮಕೂರು 44, ಉಡುಪಿ 14, ಉತ್ತರಕನ್ನಡ 30, ವಿಜಯಪುರ 9, ಯಾದಗಿರಿಜಿಲ್ಲೆಯಲ್ಲಿ 14 ಪ್ರಕರಣಗಳು ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News